ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ಐಸಿಎಸ್ಇ, ಸಿಬಿಎಸ್ಇ, ಐಬಿಐಜಿಸಿಎಸ್ ಹಾಗೂ ಇನ್ನಿಿತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆೆಗಳಲ್ಲಿ ಕಡ್ಡಾಾಯವಾಗಿ ಭಾಷಾ ಕಲಿಕೆಗೆ ಒತ್ತು ನೀಡಲು ಸೂಚನೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಪರಿಷತ್ತಿಿನಲ್ಲಿ ಪ್ರಶ್ನೊೊತ್ತರ ವೇಳೆ ಸದಸ್ಯ ಎನ್ ರವಿಕುಮಾರ ಅವರ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಸಚಿವರು, ಕನ್ನಡ ಭಾಷಾ ಕಲಿಕಾ ಅಧಿನಿಯಮ ಪಾಲಿಸದ ಶಿಕ್ಷಣ ಸಂಸ್ಥೆೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಭಾಷಾ ಕಲಿಕಾ ಅಧಿನಿಯಮ ಅನುಷ್ಠಾಾನಗೊಳಿಸಲಾಗಿದ್ದು, ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಬೆಂಗಳೂರು ಇಂಟೆರ್ ಶಾಲೆ ಮತ್ತು ದೊಡ್ಡಕಣ್ಣಹಳ್ಳಿಿಯ ಇನೋವೆಟೀವ್ ಶಾಲೆಯ ಮೇಲೆ ನಿಯಮಾನುಸಾರ ದಂಡ ವಿಧಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಕನ್ನಡ ಭಾಷಾಕಲಿಕಾ ಅಧಿನಿಯಮ 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷಾ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷಾಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿಿತೀಯ ಭಾಷೆಯನ್ನಾಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆ ನೀಡಲಾಗುತ್ತಿಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿಿರುವ ಶಾಲೆಗಳು ಇತರ ಪಠ್ಯಕ್ರಮಕ್ಕೆೆ ಸಂಯೋಜನೆ ಹೊಂದಲು ನಿರಾಕ್ಷೇಪಣ ಪತ್ರಕ್ಕೆೆ ಮನವಿ ಸಲ್ಲಿಸುವಾಗ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿಿತೀಯ ಭಾಷೆಯನ್ನಾಾಗಿ ಬೋಧಿಸುವುದಾಗಿ ಮುಚ್ಚಳಿಕೆ ಪತ್ರ ಸಲ್ಲಿಸಿ, ಕನ್ನಡ ಕಲಿಕಾ ಅಧಿನಿಯಮವನ್ನು ಪಾಲಿಸುವುದಾಗಿ ಪ್ರಮಾಣಿಕರಿಸಿದಲ್ಲಿ ಮಾತ್ರ, ಸದರಿ ಶಾಲೆಗಳಿಗೆ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ನಿರಾಕ್ಷೇಪಣ ಪತ್ರ ನೀಡಲಾಗುತ್ತಿಿದೆ ಎಂದು ಸಚಿವರು ತಿಳಿಸಿದರು.
ಎಲ್ಲ ಪಠ್ಯಕ್ರಮಗಳಲ್ಲಿ ಕಡ್ಡಾಯ ಭಾಷೆ ಕಲಿಕೆಗೆ ಒತ್ತು : ಸಚಿವ ಎಸ್ ಮಧು ಬಂಗಾರಪ್ಪ

