ಸುದ್ದಿಮೂಲ ವಾರ್ತೆ ರಾಯಚೂರು, ಜ.20:
ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಾಶ್ರಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ಜನೆವರಿ 21ರ ಬೆಳಿಗ್ಗೆೆ 11ಕ್ಕೆೆ ಹಮ್ಮಿಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಾಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಾಟನೆ ನೆರವೇರಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಗಂಗಾಮತಸ್ಥ ಸಮಾಜದ ಜಿಲ್ಲಾಧ್ಯಕ್ಷರಾದ ಕೆ.ಶಾಂತಪ್ಪ ಅವರು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕುರಿತು ಉಪನ್ಯಾಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

