ಸುದ್ದಿಮೂಲ ವಾರ್ತೆ ರಾಯಚೂರು, ಜ.05:
ರಾಯಚೂರು ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ಎಡೆದೊರೆ ನಾಡು ರಾಯಚೂರು ಉತ್ಸವ-2026 ಹಮ್ಮಿಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 8ರಂದು ಬೆಳಗ್ಗೆೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಈ ಸಭೆಗೆ ರಾಯಚೂರು ಜಿಲ್ಲೆಯಲ್ಲಿನ ವಿವಿಧ ಎಲ್ಲ ಸಂಘಟನೆಗಳ ಹಾಗೂ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

