ಸುದ್ದಿಮೂಲ ವಾರ್ತೆ
ಮೈಸೂರು, ಜೂ. 26: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಸೋಮವಾರ ನಡೆದಿದೆ.
ಗಾಯಗೊಂಡ ಶಾಲಾ ಮಕ್ಕಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡ ಮೂವರು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಟಿ.ನರಸೀಪುರದ ನಾನಾ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.