ಸುದ್ದಿಮೂಲ ವಾರ್ತೆ
ಮೈಸೂರು, ಜು.5 : ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಗದ್ದೆಗೆ ಉರುಳಿದ ಘಟನೆ ಟಿ.ನರಸೀಪುರ ತಾಲೂಕಿನ ಕುಳ್ಳನಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಇದರಿಂದ 10ಕ್ಕೂ ಹೆಚ್ಚು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ನರಸೀಪುರ ಶಾಹಿ ಗಾರ್ಮೆಂಟ್ಸ್ ಮಹಿಳಾ ನೌಕರರನ್ನ ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ.
ಗಾಯಾಳುಗಳಿಗೆ ಬನ್ನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮೂವರು ಮಹಿಳೆಯರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬನ್ನೂರು ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.