ಸುದ್ದಿಮೂಲ ವಾರ್ತೆ ಪುತ್ತೂರು, ಅ.20:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಭಾಗವಹಿಸಿದ್ದ ‘ಅಶೋಕ ಜನಮನ -2025’ ಹಾಗೂ ದೀಪಾವಳಿ ಪ್ರಯುಕ್ತ ವಸದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ರೈ ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀೆಡಾಂಗಣದಲ್ಲಿ ‘ಅಶೋಕ ಜನಮನ -2025’ ಹಾಗೂ ದೀಪಾವಳಿ ಪ್ರಯುಕ್ತ ವಸದಾನ ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆೆಲೆ ಸಾರ್ವಜನಿಕರಿಗೆ ತಟ್ಟೆೆ, ವಸ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊೊಂಡಿದ್ದರು.
ಕ್ರೀೆಡಾಂಗಣದಲ್ಲಿ ಸಾಮರ್ಥ್ಯಕ್ಕಿಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆೆಲೆ ನೂಕುನುಗ್ಗಲು ಉಂಟಾಗಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆೆ ಉಂಟಾಗಿದೆ. ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆೆಗೆ ದಾಖಲಿಸಿ ಚಿಕಿತ್ಸೆೆ ಕೊಡಿಸಲಾಗುತ್ತದೆ.