ನವದೆಹಲಿ, ಏ.1: ದೇಶದಲ್ಲಿ ಕೋವಿಡ್ 19 ಸೋಂಕು ಮತ್ತೆ ಹೆಚ್ಚಳವಾಗುತ್ತಿದ್ದು, ಶನಿವಾರ 2,994 ಹೊಸ ಪ್ರಕರಣಗಳು ದಾಖಲಾಗಿವೆ.
ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿಕೆ ಆಗಿದೆ. ಇತ್ತೀಚಿನ ಆರೋಗ್ಯ ಬುಲೆಟಿನ್ ಪ್ರಕಾರ, ದೈನಂದಿನ ಪಾಸಿಟಿವಿಟಿ ದರ ಶೇ 2.09 ರಷ್ಟಿದೆ.
.ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ ಕೋವಿಡ್ -19 ಗಾಗಿ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊಸ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಆದರೆ, ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ತಕ್ಷಣದ ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.