ಸುದ್ದಿಮೂಲ ವಾರ್ತೆ
ಮೈಸೂರು, ಜು.17 : ಚಿಕನ್ ಊಟ ಸೇವಿಸಿದ 30 ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಸ್ವಸ್ಥ ಮಕ್ಕಳಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ .ಮನೆಗೆ ತೆರಳಿದ ಬಳಿಕ ಮೊದಲಿಗೆ ಕೆಲವೇ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ವಾಂತಿ, ಭೇದಿ ಕಂಡು ಬಂದಿದೆ. ಇನ್ನುಳಿದ ವಿದ್ಯಾರ್ಥಿಗಳಲ್ಲೂ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು.