ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ 30: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ. 2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಮೂಲಕ ಶೇ 4% ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.