ಸುದ್ದಿಮೂಲ ವಾರ್ತೆ
ಬೆಂಗಳೂರು, ಸೆ.29: ಕರ್ನಾಟಕ ಬಂದ್ನಿಂದಾಗಿ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಸುಮಾರು 400 ಕೋಟಿಗಳಷ್ಟು ನಷ್ಟ ಉಂಟಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಹೇಳಿದ್ದಾರೆ.
ಇಂದು ನಡೆದ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಇದಕ್ಕೆ ಕರ್ನಾಟಕದಾದ್ಯಂತ ಇರುವ ನಮ್ಮ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕಾ ವಲಯದ ಸುಮಾರು ಶೇ.70 ರಷ್ಟು ಬೆಂಬಲ ನೀಡಿರುತ್ತಾರೆ.
ಈ ಬಂದ್ ಎಫ್ಕೆಸಿಸಿಐ ಸಂಪೂರ್ಣ ಬೆಂಬಲ ನೀಡಿದ್ದು, ಈ ಬಂದ್ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು 400 ಕೋಟಿ ರೂ. ಗಳಷ್ಟು ನಷ್ಟ ಆಗಿರುತ್ತದೆ.
ಆದರೂ, ಕರ್ನಾಟಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಮತ್ತು ನಾಡು, ನುಡಿ, ನೆಲ, ಜಲ, ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ನಾವೆಲ್ಲರೂ ನೀರನ್ನು ಸಂರಕ್ಷಿಸಬೇಕು ಮತ್ತು ಈ ಅವಧಿಯಲ್ಲಿ ಅದನ್ನು ನ್ಯಾಯಯುತವಾಗಿ ಬಳಸಬೇಕು.
ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಮಾತುಕತೆ ಮೂಲಕ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಿಗೆ ಎಫ್ಕೆಸಿಸಿಐ ಆಗ್ರಹಿಸುತ್ತದೆ ಎಂದು ಲಹೋಟಿ ಹೇಳಿದ್ದಾರೆ.