ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.11:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣಕ್ಕಾಾಗಿ ಕಳೆದ ಎರಡೂವರೆ ವರ್ಷಗಳಲ್ಲಿ 47.38 ಕೊ. ರೂಪಾಯಿ ಖರ್ಚಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆೆ ಗುರುತಿಲ್ಲದ ಪ್ರಶ್ನೆೆಗೆ ಸರ್ಕಾರ ಲಿಖಿತ ಉತ್ತರದ ಮೂಲಕ ನೀಡಿರುವ ಮಾಹಿತಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಿಯಾದ ಬಳಿಕ ಅಂದರೆ 2023 ರಿಂದ 2025 ರ ನವೆಂಬರ್ವರೆಗೆ ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆೆ ಸರ್ಕಾರದ ಬೊಕ್ಕಸದಿಂದ ಬರೋಬ್ಬರಿ 47 ಕೋಟಿ 38 ಲಕ್ಷ 24 ಸಾವಿರದ 347 ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಮಾಹಿತಿ ಒದಗಿಸಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮತ್ತು ದೆಹಲಿ, ಚೆನ್ನೈ, ಹೈದರಾಬಾದ್ನಂತಹ ಹೊರ ರಾಜ್ಯಗಳಿಗೆ ಅಧಿಕೃತ ಓಡಾಟ ಮಾಡಿದ್ದರಿಂದ ಈ ವೆಚ್ಚವಾಗಿದೆ. 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರ ಜನವರಿ 15 ರವರೆಗೆ 19.35 ಕೋಟಿ ರೂ. ವೆಚ್ಚ ಮಾಡಲಾಗಿತ್ತು ಎಂದು ಉತ್ತರದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಅಧಿಕಾರಕ್ಕೆೆ ಬಂದಾಗಿನಿಂದ ಈವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಹಾಗೂ ದೆಹಲಿ, ಹೈದರಾಬಾದ್, ಚೆನ್ನೈ ಮುಂತಾದ ಹೊರರಾಜ್ಯಗಳ ಪ್ರಮುಖ ನಗರಗಳಿಗೆ ತೆರಳಲು ಈ ವಿಮಾನಯಾನವನ್ನು ಬಳಸಿಕೊಂಡಿದ್ದಾರೆ.

