ಸುದ್ದಿಮೂಲ ವಾರ್ತೆ ಮಂಗಳೂರು, ಜ.10:
ಮನರೇಗಾ ಉಳಿಸಿ ಅಭಿಯಾನ ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಾಪ್ತಿಿಯಲ್ಲಿ 5-10 ಕಿ.ಮೀ ಪಾದಯಾತ್ರೆೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಿಕ್ಕಿಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನ ಹಮ್ಮಿಿಕೊಂಡಿದ್ದೇವೆ ಎಂದು ಹೇಳಿದರು.
ಮನರೇಗಾ ಉಳಿಸಿ ಅಭಿಯಾನ ಇಡೀ ರಾಜ್ಯದಾದ್ಯಂತ ಹಮ್ಮಿಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆೆ ಬಗ್ಗೆೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆ ಮೂಲಕ ಇದರಿಂದ ಗ್ರಾಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ೆ.2ರವರೆಗೆ ತಾಲ್ಲೂಕು ಮಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆೆ ನಡೆಸಲಾಗುವುದು. ನರೇಗಾ ಯೋಜನೆ ಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆೆ ಅರಿವು ಮೂಡಿಸಲಾಗುವುದು. ಮತ್ತೆೆ ನರೇಗಾ ಮರುಸ್ಥಾಾಪಿಸುವ ತನಕ ಹೋರಾಟ ಮಾಡಲಾಗುವುದು ಎಂದು ವಿವರಿಸಿದರು.
ಅಸ್ಸಾಾಂ ರಾಜ್ಯಕ್ಕೆೆ ಭೇಟಿ ನೀಡುವ ಬಗ್ಗೆೆ ಕೇಳಿದಾಗ, ಪಕ್ಷ ನನಗೆ ಜವಾಬ್ದಾಾರಿ ನೀಡಿದ್ದು, ಇದರ ಬಗ್ಗೆೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ ಎಂದರು.
ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮನರೇಗಾ ಉಳಿಸಲು ಜ.26 ನಂತರ ಹೋರಾಟ : ಡಿಸಿಎಂ

