ಬೆಂಗಳೂರು, ಜ.12: ಸ್ವಾಮಿ ವಿವೇಕಾನದಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನವನ್ನು ಗುರುವಾರ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಭವ್ಯ ಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ತೊಟ್ಟ, ಯುವಶಕ್ತಿಯ ಆದರ್ಶ,ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಮತ್ತು ನಾಡಿನ ಸಮಸ್ತ ಜನತೆಗೆ ರಾಷ್ಟ್ರೀಯ ಯುವ ದಿನದ ಹಾರ್ದಿಕ ಶುಭಾಶಯಗಳು. ಸ್ವಾಮಿ ವಿವೇಕಾನಂದರ ತೋರಿದ ಮಾರ್ಗದಲ್ಲಿ ಮುನ್ನಡೆದು , ನವಭಾರತವನ್ನು ನಿರ್ಮಿಸುವತ್ತ ಮುನ್ನಡೆಯೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ