ಬೆಂಗಳೂರು, ಜ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಫೆ.17ರಂದು ಮಂಡನೆಯಾಗಲಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 2023-23ನೇ ಸಾಲಿನ ಬಜೆಟ್ ಮಂಡನೆ ಸಂಬಂಧ ಫೆ.16ರಿಂದ ವಿಧಾನಮಂಡಲ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ.
ಫೆ.16ರಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಜಂಟಿ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಅದರ ಮರುದಿನ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬೊಮ್ಮಾಯಿ ಅವರಿಗೆ ಇದು ಎರಡನೇ ಬಜೆಟ್ ಆಗಿದೆ.