ಸುದ್ದಿಮೂಲ ವಾರ್ತೆ ಸಿಂಧನೂರು, ಫೆ. 12:
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್ )ದ ಸದಸ್ಯ ಕಾರ್ಯದರ್ಶಿ ರೂಪಾಲಿ ಬ್ಯಾನರ್ಜಿ ಸಿಂಗ್ ಅವರು ರವಿವಾರ ತಾಲೂಕಿನ ಬೆಂಗಾಲಿಕ್ಯಾಂಪ್ 2ಕ್ಕೆ ಭೇಟಿ ನೀಡಿ ಮಕ್ಕಳ ಸಮಸ್ಯೆಗಳ ಅಹವಾಲು ಸ್ವೀಕರಿಸಿದರು.
ಬಂಗಾಲಿ ಕ್ಯಾಂಪಿನ ನಿವಾಸಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹಾಗೂ ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳ ಪಡೆಯುವಿಕೆಯಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಮನ್ಸೂರ್ ಅಹಮದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ವೆಂಕಟೇಶ್, ಸಿಂಧನೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡ, ಅಧೀಕ್ಷಕ ಚಾಮರಾಜ್, ಮೇಲ್ವಿಚಾರಕಿ ಜಯಲಲಿತಾ ಸೇರಿದಂತೆ ಅನೇಕರು ಇದ್ದರು.