ಸುದ್ದಿಮೂಲ ವಾರ್ತೆ ಬಳ್ಳಾರಿ, ಫೆ. 15:
ಲಿಂಗಾಯತ ಸ್ವತಂತ್ರ ಧರ್ಮದ ಸ್ಥಾನಮಾನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಬಸವದಳ ಟ್ರಸ್ಟ್ನ ಸದಸ್ಯರು ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ಸರ್ಕಾರ ‘ಲಿಂಗಾಯತ ಸ್ವತಂತ್ರ ಧರ್ಮ’ದ ಮರು ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಬಸವಣ್ಣನವರ ಐಕ್ಯಮಂಟಪಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಬೇಕು. ಕಲಬುರ್ಗಿ ವಿಶ್ವವಿದ್ಯಾಲಯಕ್ಕೆ ಬಸವೇಶ್ವರ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.
ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ರಾಷ್ಟ್ರೀಯ ಬಸವದಳ ಟ್ರಸ್ಟ್ನ ಜಿಲ್ಲಾ ಘಟಕದ ಸದಸ್ಯರು ಮತ್ತು ಪದಾಧಿಕಾರಿಗಳು, ಸಮಾಜ ಸುಧಾರಕ, ಸಮಾನತೆಯ ಹರಿಕಾರ, ವಚನಗಳ ಮೂಲಕ ಎಲ್ಲರನ್ನೂ ತಲುಪಿದ್ದ ಬಸವಣ್ಣನವರ ಪ್ರಸ್ತುತತೆ ಕುರಿತು ಸರ್ಕಾರಕ್ಕೆ ವಿವರಿಸಿದ್ದಾರೆ.