ಸುದ್ದಿಮೂಲವಾರ್ತೆ ಮಾನ್ವಿ ಫೆ-18
ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಗಂಗಾಧರ ನಾಯಕ ಬಿಜೆಪಿಯ ಸೂಕ್ತ ಅಭ್ಯರ್ಥಿಯಾಗಿದ್ದು ಈ ಸಲ ಎಲ್ಲರೂ ಕೂಡಿ ಇವರನ್ನು ಗೆಲ್ಲಿಸಬೇಕೆಂದು ಮಾಜಿ ಶಾಸಕ ಬಸನಗೌಡ ಬ್ಯಾಗವಾಟ ಹೇಳಿದರು.
ಶನುವಾರ ಪಟ್ಟಣದ ಬಾಲಾಜಿ ಕಾಂಫರ್ಟ್ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಗಂಗಾಧರ ನಾಯಕ ಅಭಿಮಾನಿ ಬಳಗದ ವತಿಯಿಂದ ನಡೆದ ಮಾಜಿ ಶಾಸಕ ಹಾಗೂ ರಾಷ್ಟ್ರೀಯ ಎಸ್.ಟಿ ಮೋರ್ಚಾ ಉಪಾಧ್ಯಕ್ಷ ಗಂಗಾಧರ ನಾಯಕ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ಅಲೆಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಜಯಗಳಿಸುತ್ತಾ ಬಂದಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಜಯ ಗಳಿಸುತ್ತಿಲ್ಲವಾಗಿದೆ. 2023 ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ವತಿಯಿಂದ ಸಂಪರ್ಕ ಅಭಿಯಾನದ ಮೂಲಕ ಪಕ್ಷವನ್ನು ಸಂಘಟಿಸಲಾಗಿದ್ದು ಗೆಲವು ಖಚಿತವಾಗಿದೆ. ಮುಖಂಡರು ಹಾಗೂ ಕಾರ್ಯಕರ್ತರು ಸಮನ್ವಯದಿಂದ ಒಗ್ಗಟ್ಟಾಗಿ ಈ ಬಾರಿ ಗಂಗಾಧರ ನಾಯಕ ಅವರನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು.
ಮಾಜಿ ಶಾಸಕ ಗಂಗಾಧರ ನಾಯಕ ಮಾತನಾಡಿ ರಾಜ್ಯದಲ್ಲಿ ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ಪಕ್ಷ ಗಟ್ಟಿಯಾಗಿದ್ದು ಬಿಜೆಪಿ ಪಕ್ಷದ ವತಿಯಿಂದ ಈ ಬಾರಿ ನನಗೆ ಟಿಕೆಟ್ ಸಿಗುವ ಭರವಸೆ ಇದ್ದು, ನಾನು ಗೆಲವು ಸಾಧಿಸಲು ಕಾರ್ಯಕರ್ತರು ಹಾಗೂ ಮುಖಂಡರ ಸಹಾಕಾರ ಅಗತ್ಯವಿದೆ. ಕಾರಣ ಎಲ್ಲರೂ ಒಂದಾಗಿ ನನಗೆ ಆಶೀರ್ವಾದ ಮಾಡಬೇಕೆಂದು ಕೋರಿದರು.
ಈ ಕಾರ್ಯಕ್ರಮದಲ್ಲಿ ಮಸ್ಕಿಯ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಮುಖಂಡರಾದ ಶರಣಪ್ಪಗೌಡ ಜಾಡಲದಿನ್ನಿ, ಶರಣಪ್ಪಗೌಡ ನಕ್ಕುಂದಿ, ತಿಮ್ಮಾರೆಡ್ಡಿ ಭೋಗಾವತಿ, ಮಲ್ಲನಗೌಡ ನಕ್ಕುಂದಿ, ಮಲ್ಲಿಕಾರ್ಜುನ ಪಾಟೀಲ್ ಸಂಗಾಪುರ, ಕೆ.ಬಸವಂತಪ್ಪ, ವಿರೇಶನಾಯಕ ಬೆಟ್ಟದೂರು, ಶ್ರೀಕಾಂತ ಪಾಟೀಲ್ ಗೂಳಿ, ಅಯ್ಯಪ್ಪ ನಾಯಕ ಮ್ಯಾಕಲ್, ಆರ್.ಮುತ್ತುರಾಜಶೆಟ್ಟಿ, ಮಲ್ಲಿಕಾರ್ಜುನಗೌಡ ಪೋತ್ನಾಳ್, ಕುಮಾರಸ್ವಾಮಿ ಪೋತ್ನಾಳ್, ಶಿವಶರಣಗೌಡ, ನಾಗಲಿಂಗಸ್ವಾಮಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು, ನೂರಾರು ಅಭಿಮಾನಿಗಳು ಭಾಗವಹಿಸಿ ಗಂಗಾಧರ ನಾಯಕ ಇವರಿಗೆ ಶುಭಾಶಯ ಕೋರಿದರು.
ಸಮಾರಂಭಕ್ಕೆ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಗಂಗಾಧರ ನಾಯಕ ಅವರಿಗೆ ಶುಭಾಶಯ ಕೋರಿ ಮುಂದೆ ನೀವು ಗೆದ್ದು ಬರುತ್ತೀರಿ ಎಂದು ಆಶಯ ವ್ಯಕ್ತಪಡಿಸಿದರು.