ಸುದ್ದಿಮೂಲ ವಾರ್ತೆ
ಬೆಂಗಳೂರು.ಮಾ.21: ಬಿಪಿಎಲ್ ಕಾರ್ಡ್ ದಾರರಂತೆ ಎಪಿಎಲ್ ಕಾರ್ಡು ಹೊಂದಿರುವವರಿಗೂ ಉಚಿತ ಡಯಾಲಿಸಿಸ್ಗೆ ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಅವರು ಇಂದು ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್ ನಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಇನ್ಸ್ಟಿಟ್ಯೂಟ್ ಆಫ್ ನೆಪ್ರೂ ಯುರಾಲಾಜಿ ಇವರ ಸಂಯುಕ್ತಶ್ರಾಯದಲ್ಲಿ ಏರ್ಪಡಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ”ದ ಪ್ರಥಮ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು
ಎಪಿಎಲ್ ಕಾರ್ಡು ಹೊಂದಿರುವವರಿಗೂ ಉಚಿತ ಡಯಾಲಿಸಿಸ್ ಗೆ ಅವಕಾಶವನ್ನು ಕಲ್ಪಿಸಿಕೊಡುವ ಬಗ್ಗೆ ಈಗಾಗಲೇ ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಿದ್ದು ಶೀಘ್ರದಲ್ಲಿಯೇ ಈ ಯೋಜನೆಯನ್ನು ಕಾರ್ಯಾರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 68 ಡಯಾಲಿಸಿಸ್ ಉಪಕರಣಗಳ ವ್ಯವಸ್ಥೆಯನ್ನು ಮಾಡಲು ಸ್ಥಳಾವಕಾಶವಿದ್ದು, ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಯ ಮೂಲಕ ಅತ್ಯುತ್ತಮ ಸೇವೆಯನ್ನು ನೀಡಲಾಗುತ್ತಿದೆ ಎಂದರು.
ಮಾನವೀಯತೆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಇಡೀ ನಗರದಲ್ಲಿ ಐತಿಹಾಸಿಕ ಕಟ್ಟಡಗಳಲ್ಲಿ 90 ಭಾಗ ಕಟ್ಟಡವನ್ನು ಗೋವಿಂದರಾಜ್ ನಗರ ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಬಿಬಿಎಂಪಿ ರವರ ನೇತೃತ್ವದಲ್ಲಿ ಪಂತರಪಾಳ್ಯದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಹೆಸರಲ್ಲಿ 210 ಬೆಡ್ ಗಳ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದೇವೆ, ವಾಯುವಿಹಾರಕ್ಕಾಗಿ 16 ಎಕರೆ ಜಾಗವನ್ನು ಕೆರೆ ಹಣದಲ್ಲಿ ಲೋಕಾರ್ಪಣೆ ಮಾಡಲಿದ್ದೇವೆ.
ಇದೆ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರೀನಾಥ, ಇನ್ಸ್ಟಿಟ್ಯೂಟ್ ಆಫ್ ನೆಪ್ರೂ ಯುರಾಲಾಜಿ ನಿರ್ದೇಶಕರಾದ ಡಾ. ಕೇಶವಮೂರ್ತಿ ಉಪಸ್ಥಿತರಿದ್ದರು.