ಸುದ್ದಿಮೂಲ ವಾರ್ತೆ
ಆನೇಕಲ್, ಮಾ. ಮಾ.27: ತಾಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿವೃತ್ತ ಶಿವರಾಮ ನೇತೃತ್ವದಲ್ಲಿ ಇಂದು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕೆ. ಶಿವರಾಮ್ ಸಹ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮರಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಿಡಗಂಟೆಗಳು ಬೆಳೆದು ಕಾಡಿನಂತಾಗಿತ್ತು. ಇದರಿಂದ ಇಲ್ಲಿಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿತ್ತು.
ಇದರಿಂದ ಭಾನುವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಆರೋಗ್ಯ ಕೇಂದ್ರದ ಸುತ್ತಮುತ್ತ ಜೆಸಿಬಿ ಮತ್ತು ಟ್ಯಾಕ್ಟರ್ ಮೂಲಕ ಶುಚಿಗೊಳಿಸಲಾಯಿತು.