ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.29: ರಾಮನವಮಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾ. 30ರಂದು ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.
ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ವಿರುದ್ಧ ಕ್ರಮಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.