ಸುದ್ದಿಮೂಲ ವಾರ್ತೆ
ತುಮಕೂರು, ಮಾ.29: ರಾಹುಲ್ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಖಂಡಿಸಿ, ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕ,ಎಸ್ಸಿ, ಎಸ್ಟಿ ಮತ್ತು ಓಬಿಸಿ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ನಗರದ ಭದ್ರಮ್ಮ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್, ಎಸ್ಸಿ ಘಟಕದ ಅಧ್ಯಕ್ಷ ಲಿಂಗರಾಜು, ಎಸ್ಸಿ ಘಟಕದ ಅಧ್ಯಕ್ಷ ನರಸಿಂಹಯ್ಯ, ಓಬಿಸಿ ಘಟಕದ ಅಧ್ಯಕ್ಷ ಪುಟ್ಟರಾಜು ಹಾಗೂ ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರಗೌಡ, ಪ್ರಜಾಪ್ರಭುತ್ವದ ಯಶಸ್ವಿಗೆ ಆಡಳಿತ ಎಷ್ಟು ಮುಖ್ಯವೋ, ವಿರೋಧಪಕ್ಷವೂ ಅಷ್ಟೇ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದರ ಅರಿವಿರದ ಕೇಂದ್ರದ ನರೇಂದ್ರಮೋದಿ ನೇತೃತ್ವದ ಸರಕಾರ ಸರಕಾರದ ನಡೆಯನ್ನು ಟೀಕಿಸಿದ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ,ಚುನಾವಣೆ ಸಂದರ್ಭದಲ್ಲಿ ಅವರ ಸದಸ್ಯತ್ವ ರದ್ದು ಪಡಿಸಿ,ಶಿಕ್ಷೆಗೆ ಒಳಗಾಗುವಂತೆ ಮಾಡಿರುವುದು ಸಂವಿಧಾನ ಬಾಹಿರ ಕೃತ್ಯವಾಗಿದೆ. ರಾಹುಲ್ಗಾಂಧಿ ಅವರ ಸದಸ್ಯತ್ವ ರದ್ದು ಪ್ರಕ್ರಿಯೆ ಪೂರ್ವ ನಿಯೋಜಿತದಂತೆ ಕಂಡುಬರುತ್ತಿದೆ ಎಂದು ಆರೋಪಿಸಿದರು. ಪ್ರಧಾನಿಯವರು ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಾ, ವಿರೋಧಿಗಳನ್ನು ಭಯದ ಮೂಲಕ ಹಣಿಯಲು ಹೊರಟಿದ್ದಾರೆ. ಇದು ಭಾರತದಂತಹ ರಾಷ್ಟ್ರದ ಪ್ರಧಾನಿಯೊಬ್ಬರ ನಡೆವಳಿಕೆ ಶೋಭೆ ತರುವಂತಹದ್ದಲ್ಲ.ಕೂಡಲೇ ರಾಹುಲ್ ಗಾಂಧಿ ಅವರ ಮೇಲಿನ ಅನಗತ್ಯ ಕಿರುಕುಳವನ್ನು ಕೈಬಿಡಬೇಕು. ಸದನದ ಒಳಗೆ ಮತ್ತು ಹೊರಗೆ ಪಕ್ಷಕ್ಕೆ ಆಗುತ್ತಿರುವ ಮುಜುಗರ ವನ್ನು ತಪ್ಪಿಸಲು ಹೋಗಿ ,ಈ ರೀತಿಯ ಕೃತ್ಯಕ್ಕೆ ಕೈಹಾಕಿದೆ. ಇದಕ್ಕೆ ಎಂದಿಗೂ ಕಾಂಗ್ರೆಸ್ ಕಾರ್ಯಕರ್ತರು ಬಗ್ಗುವುದಿಲ್ಲ.ಮತ್ತಷ್ಟು ಪುಟಿದೇಳಲಿದೆ ಎಂದು ಚಂದ್ರಶೇಖರಗೌಡ ನುಡಿದರು. ಅಹಮದ್, ರೆಡ್ಡಿ ಚಿನ್ನಯಲ್ಲಪ್ಪ, ಹೆಚ್.ಸಿ.ಹನುಮಂತಯ್ಯ, ಮಂಜುನಾಥ್, ರಾಜಣ್ಣ, ಶ್ರೀನಿವಾಸ್ ಕುಮಾರ್, ನರಸಿಂಹ ಮೂರ್ತಿ, ಸಂಜೀವ್ಕುಮಾರ್, ಶಿವಾಜಿ, ಶಿವಾನಂದ್, ಮಹಿಳಾ ಘಟಕದ ಡಾ.ಅರುಂಧತಿ, ನಾಗಮಣಿ, ಕೆಂಪಣ್ಣ, ಆಟೋರಾಜು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.