ಸುದ್ದಿಮೂಲ ವಾರ್ತೆ
ಬೆಂಗಳೂರು ಮಾ.30: ನಕಲಿ ಬಾಂಡ್ ಹಂಚಿದ ಆರೋಪದ ಮೇಲೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಡಿ ಸಿ ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಿ ಹೈಕೋಟ್ ಆದೇಶ ಹೊರಡಿಸಿದೆ.
ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಸಲ್ಲಿಸಿದ್ದ ಅರ್ಜಿ ಆದಾರದ ಮೇಲೆ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಲಾಗಿದೆ. ಆದರೆ ಚುಣಾವಣೆ ಪಟ್ಟಿ ಪ್ರಕಟವಾಗಿರುವುದರಿಂದ ಹೇಮಂತ್ ರಾಜ್ ಅವರ ಕೋರಿಕೆಯ ಮೇರಿಗೆ ಹೈಕೋರ್ಟ್ ಅವರ ಮನವಿಯನ್ನು ಪರಿಗಣಿಸಿ 30 ದಿನಗಳ ಕಾಲ ಆದೇಶಕ್ಕೆ ವಿರಾಮ ನೀಡಿದೆ.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವಿರುದ್ಧ ನಕಲಿ ಬಾಂಡ್ ಹಂಚಿಕೆ ಆರೋಪದ ಹಿನ್ನಲೆ ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದರು. ಈ ಆರೋಪವನ್ನು ಸುದೀರ್ಘ 5 ವರ್ಷಗಳ ಕಾಲ ವಿಚಾರಣೆ ನಡೆಸಿರುವ ಹೈಕೋರ್ಟ್ ಇಂದು ತೀರ್ಪು ನೀಡಿದೆ. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಈ ಪ್ರಕರಣದ ಹಿನ್ನೆಲೆ ಹೈಕೋಟ್ ಇವರನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.