ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.31: ಅರಕಲಗೂಡು ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕರು, ಸರ್ಕಾರದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿ ರಾಜೀನಾಮೆ ನೀಡಿದ್ದಾರೆ .
ಜೆಡಿಸ್ ಪಕ್ಷ ತೊರೆದ ಶಾಸಕ ಎ.ಟಿ ರಾಮಸ್ವಾಮಿ ಕಾಂಗ್ರೆಸ್ ಅಥವಾ ಬಿ.ಜೆ.ಪಿ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜೀನಾಮೆ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ನಾನಗಿಯೇ ಪಕ್ಷ ತೊರೆದಿಲ್ಲ. ಅವರೇ ನನ್ನನ್ನುಪಕ್ಷದಿಂದ ಹೊರ ಹಾಕಿದ್ದಾರೆ ಎಂದ ಅವರು ಕೆಲವು ಪಕ್ಷಗಳಲ್ಲಿ ಲೋಪಗಳು ಇರುತ್ತದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ