ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.31: ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಜೆ ವೇಳೆಗೆ ಅವರು ಕಾಂಗ್ರೆಸ್ ಸೇರಿ ಬಿಜೆಪಿಗೆ ಶಾಕ್ ನೀಡಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಇಂದು ಬೆಳಗ್ಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಜೊತೆಗೆ ಅವರು ಬಿಜೆಪಿ ಸದಸ್ಯತ್ವಕ್ಕೂ ಸಹ ರಾಜೀನಾಮೆ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎನ್.ವೈ. ಗೋಪಾಲಕೃಷ್ಣ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕಾಂಗ್ರೆಸ್ ಪಕ್ಷದ ಎರಡನೇ ಹಂತದ ಪಟ್ಟಿಯಲ್ಲಿ ಎನ್.ವೈ. ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮೂರು ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹ ಸೇರ್ಪಡೆಯಾದರು.
ಗೋಪಾಲಕೃಷ್ಣ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಗೋಪಾಲಕೃಷ್ಣ ನಾಲ್ಕು ಬಾರಿ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಅವರು ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.