ಸುದ್ದಿಮೂಲ
ಬಳ್ಳಾರಿ, ಏ. ೩:
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಭಾರತೀಯ ಪ್ರಜೆ ೧೮ ವರ್ಷ ದಾಟಿದರೆ ಮತದಾನ ಮಾಡಲು ಅರ್ಹ. ೨೦೦೪ರಲ್ಲಿ ಜನಿಸಿದ ಪ್ರತಿಯೊಬ್ಬರೂ ೨೦೨೩ರ ಏಪ್ರಿಲ್ ೧ ಕ್ಕೆ ೧೮ ವರ್ಷ ಪೂರ್ಣಗೊಳಿಸಿದವರೂ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
೧೮ ವರ್ಷ ಪೂರ್ಣಗೊಳಿಸಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, www.nvsp.in , www.voterportal.eci.gov.in ಅಥವಾ ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಆನ್ಲೈನ್ ನೋಂದಣಿ ಕೈಗೊಳ್ಳಬಹುದು.
ಯುವಜನರು ತಮ್ಮ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರವನ್ನು ಸಹ ಸಂಪರ್ಕಿಸಬಹುದಾಗಿದೆ. ಇಲ್ಲವಾದಲ್ಲಿ ಸಹಾಯವಾಣಿ ೧೯೫೦ ಸಂಖ್ಯೆಗೆ ಸಂಪರ್ಕಿಸಬಹುದು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏ.೧೧ರ ಮಂಗಳವಾರ ಕೊನೆದಿನವಾಗಿದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಚುನಾವಣಾ ಗುರುತಿನ ಚೀಟಿ ಪಡೆದು ಸಧೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.