ಸುದ್ದಿಮೂಲ ವಾರ್ತೆ,
ರಾಯಚೂರು ಏ: 07 ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದ್ದು, ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ತಪ್ಪದೇ ಮತದಾನ ಚಲಾಯಿಸಿ, ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಧನರಾಜ ಐಇಸಿ ಸಂಯೋಜಕರು ನರೇಗಾ ಕೂಲಿಕಾರರಿಗೆ ತಿಳಿಸಿದರು.
ಇಂದು ಶುಕ್ರವಾರ ರಾಯಚೂರು ಜಿಲ್ಲೆಯ, ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಆರಣ್ಯ ಪ್ರದೇಶದಲ್ಲಿ ಕಂದಕಗಳು ತೆಗೆಯುವ ಕೂಲಿಕಾರರಿಗೆ, ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆ ಹಮ್ಮಿಕೊಳ್ಳಲಾಯಿತು.
ಉತ್ತಮ ನಾಳೆಗಳು ಬೇಕಾದರೆ ಮತದಾನ ಮಾಡುವ ಮೂಲಕ ಎಲ್ಲ ಅರ್ಹ ನಾಗರಿಕರು ಮತದಾನದ ಹಕ್ಕು ಚಲಾಯಿಸಬೇಕು. ಮತದಾನ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ. ಮತದಾನ ಮಾಡುವ ಮೂಲಕ ಆ ಬುನಾದಿಯನ್ನು ಸದೃಢಗೊಳಿಸಿ ಎಂದರು. 18 ವರ್ಷ ಮೇಲ ಪಟ್ಟ ಪ್ರತಿಯೊಬ್ಬ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡಬೇಕು. ವಿಶೇಷ ಚೇತನರು ಹಿರಿಯ ನಾಗರಿಕರು ಮತದಾನ ಮಾಡುವಂತೆ ಕರೆ ನೀಡಿ, ಈ ವರ್ಷ ಚುನಾವಣಾ ಆಯೋಗವು ಮನೆಯಲ್ಲಿಯೇ ಇದ್ದು ಮತದಾನ ಮಾಡುವ ಅವಕಾಶವನ್ನು ವಿಶೇಷ ಚೇತನರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅವಕಾಶವನ್ನು ಕಲ್ಪಿಸಿದೆ ಎಂದು ತಿಳಿಸಿ. ಎಲ್ಲಾ ಕೂಲಿಕಾರರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧನೆ ಮಾಡಿಸಲಾಯಿತು. ಸ್ಮಾರ್ಟ್ ಮೊಬೈಲ್ ಹೊಂದಿರುವವರಿಗೆ VH App Download ಮಂಡಿಸಲಾಯಿತು.
ಏಪ್ರಿಲ್ 1 ರಿಂದ ನರೇಗಾ ಕೂಲಿ ಮೊತ್ತವು 309 ರಿಂದ 316 ಕ್ಕೆ ಹೆಚ್ಚಿಸಲಾಗಿದೆ. ಯೋಜನೆಯಡಿ ಸಿಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆಯಲು ಮಾಹಿತಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಎಪ್.ಟಿ, ಮೇಟ್ ಕೂಲಿಕಾರರು ಮತ್ತು ಇನ್ನಿತರರು ಉಪಸ್ಥಿತರಿದ್ದರು.