ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಏ.11: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎನ್ ರವಿಕುಮಾರ ಅವರು ಪಂಚರತ್ನ ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಹಾಗೂ ಮನೆ ಮನೆಗೆ ಪಂಚರತ್ನ ಯೋಜನೆ ಬಗ್ಗೆ ಕರಪತ್ರ ಹಂಚುವ ಮೂಲಕ ಮನೆ ಮನೆ ಮತಯಾಚನೆ ಮಾಡಲಾಯಿತು.
ತಾಲ್ಲೂಕಿನ ಕಸಬಾ ಹೋಬಳಿಯ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ದೊಡ್ಡದಾಸರಹಳ್ಳಿ, ಸೊರಕಾಯಲಹಳ್ಳಿ, ತಿಪ್ಪೇನಹಳ್ಳಿ, ಹುಜಗೂರು, ಕೆ.ಮುತ್ತಕದಹಳ್ಳಿ ಚಿಂತಡಪಿ, ಕನ್ನಮಂಗಲ, ಹಾಗೂ ತುಮ್ಮನಹಳ್ಳಿ ಗ್ರಾಮಗಳಲ್ಲಿ ರವಿಕುಮಾರ್ ಪ್ರಚಾರ ಮಾಡಿದರು.
ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾದ ರವಿಕುಮಾರ್ ಅವರಿಗೆ ಬೃಹತ್ ಹೂವಿನ ಹಾರಗಳ ಹಾಕುವ ಮೂಲಕ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಮಾಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ರವಿಕುಮಾರ್, ಇಡೀ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಎಲ್ಲಾ ರೈತರು, ಮಹಿಳೆಯರು, ಹೆಣ್ಣು ಮಕ್ಕಳು, ಯುವಕರು ನಮ್ಮ ಪಕ್ಷದ ಎಲ್ಲಾ ಮುಖಂಡರು ಉತ್ಸಾಹದಿಂದ ಪಂಚರತ್ನ ಯೋಜನೆಗಳ ಕರಪತ್ರವನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಾಡತಿದ್ದೇವೆ ಹಾಗೂ 2023 ವಿಧಾನ ಸಭಾ ಚುನಾವಣೆಯಲ್ಲಿ ಒಂದು ಫಲಿತಾಂಶ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಾಣವಾಗುವಂತಹ ಫಲಿತಾಂಶ ಬರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಸುರೇಂದ್ರ ಗೌಡ, ತಾದೂರು ರಘು, ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ ಉಮೇಶ್, ಸದಸ್ಯರಾದ ಸಿ.ಕೆ ಗಜೇಂದ್ರ ಬಾಬು, ಹುಜಗೂರು ರಾಮಣ್ಣ, ಹೊಡಿ ನಾಗರಾಜ್, ಮೇಲೂರು ಮಂಜುನಾಥ್, ಜೆಡಿಎಸ್ ಯುವ ಮುಖಂಡರಾದ ಅಲಸೂರು ದಿನ್ನೆ ಮುನಿರಾಜು, ತುಮ್ಮನಹಳ್ಳಿ ರಮೇಶ್, ತುಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಜೆಡಿಎಸ್ ಮುಖಂಡರು ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.