ಸುದ್ದಿಮೂಲ ವಾರ್ತೆ,
ಕಲಬುರಗಿ, ಏ.13: ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸುಮಾರು 1500 ಕೋಟಿ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಿದ್ದು, ಕ್ಷೇತ್ರದ ಜನರ ಆಶೀರ್ವಾದದಿಂದ ಮತ್ತೋಮ್ಮೆ ಗೆದ್ದು ಬರುತ್ತೇನೆ ಎಂದು ಕಲಬುರಗಿ ಗ್ರಾಮೀಣ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮೇಚ್ಚಿ, ನನ್ನ ಮೇಲೆ ವಿಶ್ವಾಸವಿಟ್ಟು, ನನ್ನಗೆ ಎರಡನೇ ಬಾರಿಗೆ ಆಯ್ಕೆ ಮಾಡಿದಕ್ಕೆ ಧನ್ಯವಾದಗಳು ತಿಳಿಸಿದರು.
ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ ವೆಂಕಟಪ್ರಸಾದ್ ಮಾಲೇಪಾಟಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ವಿಭಾಗೀಯ ಮಾಧ್ಯಮ ನಿರ್ವಹಣಾ ಕೇಂದ್ರದ ವಿಶೇಷತೆಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಧೀರ್ ಉಪಾಧ್ಯಾಯ, ಬಿಜೆಪಿ ನಗರ ಜಿಲ್ಲಾ ಮಾಧ್ಯಮ ಸಂಚಾಲಕರು ನಾಗರಾಜ್ ಮಹಾಗಾವ್ಕರ್, ಹಾಗೂ ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರು ಬಾಬುರಾವ್ ಹಗರಗುಂಡಗಿ ಉಪಸ್ಥಿತರಿದ್ದರು