ಹೊಸಪೇಟೆ (ವಿಜಯನಗರ ): ನೂತನ ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ ಸಿರಾಜ್ ಶೇಖ್ ತಕ್ಷಣದಿಂದಲೇ ಜಾರಿಗೆ ಬರು ವಂತೆ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಸಿರಾಜ್ ಶೇಕ್ ಮುಂಬರುವ ವಿಧಾನಸಭೆ ಚುನಾವಣೆ ವಿಜಯನಗರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷದ ಸಂಘಟ ನಾ ಚತುರರಾಗಿರುವ ಇವರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಹಾಲಿ ಸೇವೆ ಸಲ್ಲಿಸುತ್ತಿದ್ದರು.ಇವರ ನ್ನು ವಿಜಯನಗರ ಜಿಲ್ಲೆಯ ಅಧ್ಯಕ್ಷರನ್ನಾಗಿ ಪಕ್ಷ ಸಂಘಟಿ ಸಿ ಜಿಲ್ಲೆಯ ಎಲ್ಲಾ ವಿಧಾನಸಭಾ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ.
ನೂತನ ಅಧ್ಯಕ್ಷರಾದ ಸಿರಾಜ್ ಶೇಖ್ ಅವರಿಗೆ ಪಕ್ಷದ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗ ಳು, ಕಾರ್ಯಕರ್ತರು, ಅಭಿಮಾನಿಗಳು, ಮುಖಂ ಡರು ಶುಭ ಹಾರೈಸಿ ಅಭಿನಂದಿಸಿದ್ದಾರೆ.