ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.1: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ವೇಳೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.
ಏ9 ರಂದು ಬಂಡಿಪುರಕ್ಕೆ ಮೋದಿ ಭೇಟಿ ಹಿನ್ನೆಲೆ ಏಪ್ರಿಲ್ 8 ಮತ್ತು ಏಪ್ರಿಲ್ 9 ರಂದು ಪ್ರವಾಸಿಗರ ಸಫಾರಿ ಬಂದ್ ಆಗಲಿದೆ. ಅತಿಥಿಗೃಹ ಕಾಟೇಜ್ ಸಹ ಬಂದ್ ಆಗಲಿದೆ. ಪ್ರಧಾನಿ ಮೋದಿ ಭೇಟಿಗೆ ಬಂಡಿಪುರದಲ್ಲಿ ಸಿದ್ದತೆ ನಡೆಸಲಾಗುತ್ತಿದ್ದು, ಹಿರಿಯ ಪೊಲೀ ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೇಳುಕಾಮನಹಗಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣ ಮತ್ತು ರಸ್ತೆಗಳ ದುರಸ್ತಿ ಮಾಡಲಾಗುತ್ತಿದೆ.