ಸುದ್ದಿಮೂಲ ವಾರ್ತೆ
ಶಿವಮೊಗ್ಗ,ಏ.3: ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಜೋರಾಗಿ ನಡೆತಿದೆ. ಈ ಹಿಂದೆ ಈಗಾಗಲೇ ಇಬ್ಬರು ವಿಧಾನ ಪರಿಷತ್ ಸದಸ್ಯರು ಮತ್ತು ಒಬ್ಬ ಶಾಸಕರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಇದೀಗ ಆಯನೂರು ಮುಂಜುನಾಥ್ ಕೂಡ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಮೊದಲೇ ಮಂಜುನಾಥ್ ಅವರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸದ್ಯದಲ್ಲೇ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಮತ್ತು ಬಡವರ ಪ್ರತಿನಿಧಿಯಾಗಿ ಶಿವಮೊಗ್ಗದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಈಶ್ವರಪ್ಪ ಅವರ ಸವಾಲನ್ನು ಸ್ವೀಕರಿಸಿದ್ದೇನೆ . ಆದರೆ ನನ್ನನ್ನು ಚುನಾವಣಾ ಕಣದಲ್ಲಿ ಎದುರಿಸುವಂತೆ ಈಶ್ವರಪ್ಪ ಅವರಿಗೆ ಸವಾಲು ಹಾಕಿದರು. ಈ ಮೂಲಕ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ಸ್ಪಷ್ಟಪಡಿಸಿದರು.