ಸುದ್ದಿಮೂಲ ವಾರ್ತೆ
ತುಮಕೂರು,ಏ.6: ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಖಾಸಗಿ ಬಸ್/ ಆಟೋ/ ಕ್ಯಾಬ್ಗಳಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವ್ಯಕ್ತಿಗಳು ಅನಧಿಕೃತವಾಗಿ ವಸ್ತುಗಳನ್ನು ವಾಹನಗಳಲ್ಲಿ ಸಾಗಿಸುವುದು ಕಂಡು ಬಂದಲ್ಲಿ ಕಂಟ್ರೋಲ್ ರೂಂ ಸಂಖ್ಯೆ 0816-2272928ಕ್ಕೆ ಮಾಹಿತಿ ನೀಡುವಂತೆ ತಮ್ಮ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ಖಾಸಗಿ ಬಸ್,ಆಟೋ,ಕ್ಯಾಬ್ ಮಾಲೀಕರಿಗೆ ನಿರ್ದೇಶನ ನೀಡಿದ್ದಾರೆ. ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಚೆಕ್ಪೋಸ್ಟ್ಗಳನ್ನು ಸ್ಥಾಪನೆ ಮಾಡಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನಧಿಕೃತವಾಗಿ ಹೆಚ್ಚಿನ ಮೊತ್ತ ಹಾಗೂ ಮತದಾರರಿಗೆ ಹಂಚುವ ವಸ್ತುಗಳನ್ನು ಬಸ್ಸುಗಳ ಮೂಲಕ ಸಾಗಿಸುವುದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಂಡು ಬಂದಿರುವುದರಿಂದ ಈ ನಿರ್ದೇಶನವನ್ನು ನೀಡಿದ್ದಾರೆ.
Notice to file a complaint if unauthorized transport of goods is found in private vehicles:DC