ಸುದ್ದಿಮೂಲವಾರ್ತೆ
ಕೊಪ್ಪಳ ಏ ೦೮:ಕೊಪ್ಪಳ ವಿಧಾನಸಭೆ ಕ್ಷೇತ್ರದಿಂದ ಸಂಸದ ಸಂಗಣ್ಣ ಕರಡಿ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದೆ. ಈ ಕುರಿತು ಸಂಗಣ್ಣ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಸುಳಿವು ನೀಡಿದರು.ಕೊಪ್ಪಳ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯುವ ಬಯಕೆ ವ್ಯಕ್ತಪಡಿಸಿದರು.
ಬಿಜೆಪಿಯಿಂದ ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವಿದೆ.ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ರಾಜ್ಯದ ಮುಖಂಡರು ನನಗೆ ಟಿಕೆಟ್ ಕೊಡುವಂತೆ ಪಕ್ಷದ ಹೈಮಾಂಡ್ ಗೆ ಹೈಕಮಾಂಡಿಗೆ ರೆಕಮೆಂಡ ಮಾಡಿದ್ದಾರೆ. ಜಿಲ್ಲೆಯಲ್ಲಿ ನಿರೀಕ್ಷೆಯಷ್ಟು ಅಭಿವೃದ್ಧಿಯಾಗದ ಕಾರಣ ನಾನು ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.ಹೀಗಾಗಿ ನಾನೂ ಸಹ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇನೆ ಎಂದರು.
ಪಕ್ಷದ ಸಂಸದೀಯ ಮಂಡಳಿಯಲ್ಲಿ ಟಿಕೆಟ್ ಕುರಿತು ನಿರ್ಧಾರವಾಗಲಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಮುಂದಿನ ನಿರ್ಧಾರದ ಕುರಿತು ಈಗಲೇ ಹೇಳೋದಿಲ್ಲ.ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವಿದೆ. ನನಗೆ ಟಿಕೆಟ್ ನೀಡಿದರೆ ಜಿಲ್ಲೆಯ ಐದು ಕ್ಷೇತ್ರಗಳಿಗೆ ಅನುಕೂಲವಾಗುತ್ತದೆ ಎಂದು ಮುಖಂಡರು ಪಕ್ಷದ ರಾಜ್ಯ ನಾಯಕರಿಗೆ ಮನವರಿಕೆ ಮಾಡಿದ್ದಾರೆ.ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿ.ಎಲ್. ಸಂತೋಷ್, ನಳೀನ್ ಕುಮಾರ್ ಕಟೀಲ್ ಭೇಟಿಯಾಗಿದ್ದೇನೆ. ಅವರು ಸಹ ಧನಾತ್ಮಕವಾಗಿ ಹೇಳಿದ್ದಾರೆ ಎಂದರು.
ನಮ್ಮ ಕುಟುಂಬದಲ್ಲಿ, ಬೇರೆಯವರಿಗೆ ಟಿಕೆಟ್ ನೀಡುವ ಕುರಿತು ಸ್ಪಷ್ಠತೆ ಬೇಕಿದೆ. ಜಿಲ್ಲೆಯಲ್ಲಿ ಪಕ್ಷ ಗಟ್ಟಿಯಾಗಿದೆ. ಗಟ್ಟಿಯಾದ ಪಕ್ಷ ಉಳಿಸಿಕೊಂಡು ಹೋಗಬೇಕಾಗಿದೆ. ನಾನು ಎಂಪಿಯಾಗಿದ್ದೇನೆ. ಮೋದಿ ಆಡಳಿತ ಒಪ್ಪಿಕೊಂಡಿದ್ದೇನೆ. ಈ ಮಧ್ಯೆ ನಾನು ಜೆಡಿಎಸ್ ಸೇರುತ್ತೇನೆ ಎನ್ನುವ ಬಗ್ಗೆ ನಾನೇನು ಹೇಳೋದಕ್ಕೆ ಆಗೋಲ್ಲ ಎನ್ನುವ ಮೂಲಕ ಸಂಗಣ್ಣ ಕರಡಿ ನಡೆಯನ್ನು ನಿಗೂಡವಾಗಿಟ್ಟಿದ್ದಾರೆ.