ಸುದ್ದಿಮೂಲ ವಾರ್ತೆ
ಸೂಲಿಬೆಲೆ, ಏ.17: ಈ ಭಾರಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಸೂಲಿಬೆಲೆ ಹೋಬಳಿಯ ಬೆಂಡಿಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯ ಕಾರ್ಯಕ್ರಮದಲ್ಲಿ ಯುವಕರು ಸ್ವಾಗತಿಸಿ ಮಾತನಾಡಿದರು.
ಈ ಭಾರಿ ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯ ಸಿದ್ದರಾಮಯ್ಯನವರ ಅನ್ನಭಾಗ್ಯದ ಅಕ್ಕಿ ಉಚಿತವಾಗಿ ದೊರೆಯಲಿದೆ ಎಂದು ಹೇಳಿದರು.
ಕಂಬಳೀಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆನಂದಪ್ಪ ಮಾತನಾಡಿ ಈ-ಮುತ್ಸಂದ್ರ ಗ್ರಾಮದ ಸುಮಾರು 10 ಕುಟುಂಬಗಳು ಯಾವುದೇ ಅಸೆ ಅಮಿಷಗಳಿಲ್ಲದೇ ಸ್ವ ಇಚ್ಚೆಯಿಂದ ಕಾಂಗ್ರೇಸ್ ಪಕ್ಷ ಸಿದ್ದಾಂತಗಳು ಹಾಲಿ ಶಾಸಕರಾದ ಶರತ್ ಬಚ್ಚೇಗೌಡರ ಕ್ಷೇತ್ರಾಭಿವೃದ್ದಿಯನ್ನು ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.