ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.18: ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಆಶೀರ್ವಾದ ಪಡೆದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಮನಗರ ಕ್ಷೇತ್ರದ ಶಾಸಕರೂ ಆಗಿರುವ ಅನಿತಾ ಕುಮಾರಸ್ವಾಮಿ ಅವರು ಉಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೆ ಮೊದಲು ಕುಟುಂಬ ಸಮೇತ ದೊಡ್ಡವರಿಂದ ಆಶೀರ್ವಾದ ಪಡೆದಿದ್ದು ಅವರ ಪಾಲಿಗೆ ಪಾಲಿಗೆ ಭಾವುಕ ಕ್ಷಣವಾಗಿತ್ತು. ಈ ಸಂದರ್ಭದಲ್ಲಿ ನಿಖಿಲ್ ಅವರು ಕಣ್ಣೀರಿಟ್ಟರು.