ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.18: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್.ಅಶೋಕ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಕಲ್ಲಹಳ್ಳಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆಯ ಬಳಿಕ ಮೆರವಣಿಗೆ ನಡೆಯಿತು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಮತ್ತು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.