ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.21: ಚುನಾವನಾ ಅಕ್ರಮದ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ ಮೇಲೆ ಬುಧವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 2000ಕ್ಕೂ ಹೆಚ್ಚು ಡಿಡಿ, 5,000ಕ್ಕೂ ಅಧಿಕ ರೇಶ್ಮೆ ಸೀರೆಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 1,925 ಕ್ಕೂ ಹೆಚ್ಚಿನ ಮತದಾರರ ಚೀಟಿಗಳು ಲಭ್ಯವಾಗಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೆಜಿಎಫ್ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್ನಿಂದ ಟಿಕೆಟ್ ಸಿಕ್ಕಿರದ ಕಾರಣ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ. ಐಟಿ ದಾಳಿ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವೋಟರ್ ಐಡಿಗಳು ಪತ್ತೆಯಾಗಿವೆ. ಪ್ರತಿ ವೋಟರ್ ಐಡಿಗಳನ್ನು ತಲಾ 5,000 ರೂ. ಚೆಕ್ಗಳೊಂದಿಗೆ ಶೇಖರಿಸಿಡಲಾಗಿತ್ತು ಎನ್ನಲಾಗಿದೆ.