ಸುದ್ದಿಮೂಲ ವಾರ್ತೆ
ನೆಲಮಂಗಲ, ಏ.24: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಣದ ಹೊಳೆ ಹರಿಸುತ್ತಿದ್ದಾರೆ. ಆದರೆ, ಇಲ್ಲಿನ ಸ್ವಾಭಿಮಾನಿ ಮತದಾರರು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ನಾಯಕ್ ರನ್ನು ಗೆಲ್ಲಿಸುವ ಭರವಸೆ ಇದೆ. ನೆಲಮಂಗಲ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ನಾಯಕ್ ಅವರ ಪರವಾಗಿ ರೋಡ್ ಶೋ ನಡೆಸಿ ಅವರು ಮಾತನಾಡಿದರು.
ಕಾಂಗ್ರೆಸ್ ನವರು ಹತಾಶರಾಗಿ ರಾಜ್ಯದಲ್ಲಿ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಷರು ಬಿಟ್ಟು ಹೋದ ಬೀಜ ಕಾಂಗ್ರೆಸ್. ಕಾಂಗ್ರೆಸ್ ಅವಧಿಯಲ್ಲಿ ದೇಶವನ್ನು ಲೂಟಿ ಮಾಡಿದ್ದರು. ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದರು ಎಂದರು.
ಕ್ಷೇತ್ರದ ಅಭ್ಯರ್ಥಿ ಸಪ್ತಗಿರಿ ವೆಂಕಟೇಶ್ವರ ಆಶೀರ್ವಾದ ಪಡೆದು ನಿಮ್ಮ ಮುಂದೆ ಬಂದು ನಿಂತಿದ್ದಾರೆ. ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರಬೇಕು ಎಂದು ಮತದಾರರಲ್ಲಿ ಸಿಎಂ ಬೊಮ್ಮಾಯಿ ಮನವಿ ಮಾಡಿದರು.