ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಏ.25: ಪಕ್ಷೇತರ ಅಭ್ಯರ್ಥಿ ಆಂಜಿನಪ್ಪ (ಪುಟ್ಟು) ಅವರನ್ನು ಮತ್ತೊಬ್ಬ ಪಕ್ಷೇತರ ಅಭ್ಯರ್ಥಿಯಾಗಿದ್ದ ಸಿ.ಎಂ. ಬೈರೇಗೌಡ ಬೆಂಬಲಿಸಿದ್ದಾರೆ. ತಾಲ್ಲೂಕಿನ ಆನೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಲತಾ ದೇವರಾಜ್ ಅವರ ಮನೆಯಲ್ಲಿ ಸಿ.ಎಂ. ಬೈರೇಗೌಡ ಅವರು ಆಂಜಿನಪ್ಪ ಬಣ ಸೇರಿದರು. ಮಾನವ ಹಕ್ಕುಗಳ ಕಮಿಟಿ ಹೆಸರಿನಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದ ಬೈರೇಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದೇ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಆಂಜಿನಪ್ಪ ಸಹ ಪಕ್ಷೇತರವಾಗಿ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಅವರ ಕೈ ಬಲಪಡಿಸಲು ತಮ್ಮ ನಾಮಪತ್ರ ವಾಪಸ್ ಪಡೆದು ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ಬೈರೇಗೌಡ, ಸಮಾಜ ಸೇವಕ ಆಂಜಿನಪ್ಪ ಕ್ಷೇತ್ರದಲ್ಲಿ ಎಂಟ್ಟತ್ತು ವರ್ಷಗಳಿಂದ ಸಮಾಜ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆ ಹೊಂದಿದ್ದರು. ಆದರೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ದಿಸುತಿದ್ದು , ಅವರ ಕೈ ಬಲ ಪಡಿಸಿ ನಮ್ಮ ಸಮಿತಿಯ 2800 ಸದಸ್ಯರು ಪುಟ್ಟು ಆಂಜಿನಪ್ಪ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಆಂಜಿನಪ್ಪ (ಪುಟ್ಟು) ರವರು,ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬಡವರ ಧ್ವನಿಯಾಗಿ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದ ಮಾನವ ಹಕ್ಕುಗಳ ಕಮಿಟಿಯ ಸಿ.ಎಂ ಬೈರೇಗೌಡರ ಉದ್ದೇಶವು ನಮ್ಮಉದ್ದೇಶವು ಒಂದೇ ಆಗಿದೆ. ಅವರು ನನಗೆ ಬೆಂಬಲ ಸೂಚಿಸಿ ತಮ್ಮ ನಾಮಪತ್ರ ವಾಪಸ್ ಪಡೆದಿರುವುದು ಸಂತಸದ ವಿಷಯ ಎಂದರು. ಈ ಸಂದರ್ಭದಲ್ಲಿ ಆನೂರು ಗ್ರಾಮ ಪಂಚಾಯತಿ ಸದಸ್ಯರಾದ ಲತಾ ದೇವರಾಜ್, ಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸೌಮ್ಯ ಮಂಜುನಾಥ್, ತಲಕಾಯಾಲಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಶ್ವತ್ಥ್ ರೆಡ್ಡಿ ,ಆನೂರು ನಟರಾಜ್, ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.