ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ.25: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿಯ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ 2022-23ನೇ ಸಾಲಿನ ದ್ವಿತೀಯ ಪಿಯುಸಿ ಒಟ್ಟಾರೆ ಫಲಿತಾಂಶ ಶೇ. 99 ರಷ್ಟು ಬಂದಿದೆ ಎಂದು ಪ್ರಾಂಶುಪಾಲ ನಾಗಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಲೇಜಿನ ವಿದ್ಯಾರ್ಥಿನಿಯರು ವಿಜ್ಞಾನ ವಿಭಾಗದಲ್ಲಿ ಶೇ.98 ರಷ್ಟು ಈ ವಿಭಾಗದಲ್ಲಿ 16 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 05 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 10 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕಾಲೇಜಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರ ವಿವರ: ಜೆಎಸ್ ಅಭಿಶ್ರೀ 560 (94%), ಆರ್. ಲಕ್ಷ್ಮೀಮೇಘನಾ 545 (90.83%), ಕೆಎ ಅನುಷಾ 544 (90.66%), ಎಸ್ ಸಿರಿಷಾ 542 (90.33%), ವಿ ಅನಿತಾ 540 (90%) ಅಂಕ ಗಳಿಸಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ಫಲಿತಾಂಶ ಬಂದಿರುತ್ತದೆ. ಈ ವಿಭಾಗದಲ್ಲಿ ಒಟ್ಟು 17 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು 08 ವಿದ್ಯಾರ್ಥಿನಿಯರು ಅತ್ಯುನ್ನತ ದರ್ಜೆಯಲ್ಲಿ, 09 ವಿದ್ಯಾರ್ಥಿನಿಯರು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿನಿಯರ ವಿವರ ಕೆಎಸ್ ಶ್ರಾವಣಿ 574(95.66%), ಇ ಮಾಹಿತಾ 539 (89.83%), ಬಿ ತಸ್ಮಿಯಾ 537(89.5%), ಕೆ ಜಮುನಾ 530 (88.83) ಅಂಕ ಗಳಿಸಿರುತ್ತಾರೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮ ರೀತಿಯಲ್ಲಿ ಬಂದಿರುವುದಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಪ್ರಾಂಶುಪಾಲರು, ಬೋಧಕಾ/ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.