ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ. 26: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನದ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಮತಗಟ್ಟೆಗೆ ಕರೆತಂದು ಮತ ಚಲಾಯಿಸುವಂತೆ ಮಾಡುವುದು ನಮ್ಮ ಗುರಿ ಎಂದು ತಾಲ್ಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಮಂಜುನಾಥ ಜಿ.ಆರ್ ತಿಳಿಸಿದರು.
ಅವರು ಬುಧವಾರ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನ ಹೆಚ್ಚಾಗಿ ಸೇರುವುದರಿಂದ ಅಲ್ಲಿ ಮತದಾನದ ಜಾಗೃತಿ ಅಭಿಯಾನ ಕೈಗೊಂಡು ಜನ ಸಾಮಾನ್ಯರಿಗೆ ಮತದಾನದ ಕುರಿತು ಅರಿವು ಮೂಡಿಸಿ ಪ್ರತಿಜ್ಞಾವಿಧಿಯನ್ನು ಭೊದಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತೆ ಪಂಪಶ್ರೀ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.