ಸುದ್ದಿಮೂಲ ವಾರ್ತೆ
ಹುಬ್ಬಳ್ಳಿ,ಏ.27: ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆದ ಸಂವಾದದ ಬಳಿಕ ಹುಬ್ಬಳ್ಳಿಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ನೆಚ್ಚಿನ ಪ್ರಧಾನಿಯವರು ಕಾರ್ಯಕರ್ತರ ಜೊತೆಗೆ ಸುದೀರ್ಘ ಸಂವಾದ ನಡೆಸಿದರು. ಸಂವಾದದಲ್ಲಿ ಹಲವಾರು ವಿಚಾರ ಹೇಳಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಬಗ್ಗೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದು, ಮೋದಿಯವರು ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ ಎಂದರು.
ಮೋದಿಯವರ ಮಾರ್ಗದ ಅಂಶಗಳನ್ನು ಹಿಡಿದು ರಾಜ್ಯ ಜನತೆ ಮುಂದೆ ಹೋಗುತ್ತೇವೆ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದರು.
ಅವರ ಅಪೇಕ್ಷೆವನ್ನು ನಾವು ನೇರೆವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಕ್ತದಲ್ಲಿ ಬರೆದುಕೊಡುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದರು.