ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ.27: ಜಿಲ್ಲಾ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಚಿಕ್ಕಬಳ್ಳಾಪುರ ಇವರ ವತಿಯಿಂದ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವನ್ನು 06 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಮೇ 1ರಿಂದ 15 ರವರೆಗೆ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಚಿತ್ರಕಲೆ, ಕರಕುಶಲೆ, ಸಮೂಹ ನೃತ್ಯ, ಸಂಗೀತ, ಯೋಗ, ಕರಾಟೆ, ಜೇಡಿ ಮಣ್ಣಿನ ಕಲೆ, ಚಟುವಟಿಕೆಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆಸಕ್ತರು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಹಾಗೂ ಅರ್ಜಿಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ದೂ.ಸಂ: 08156-277111, 9964868674 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.