ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.29: ಬೆಂಗಳೂರಿನ ಮಾಗಡಿ ರಸ್ತೆ ನೈಸ್ ಜಂಕ್ಷನ್ನಿಂದ ಆರಂಭವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನೋಡಲು ಜನಸಾಗರ ಸೇರಿದೆ.
ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ನಿಂದ ಹೊರಟು ಪ್ರಧಾನಿ ಮೋದಿ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ಬಳಿಕ ಅಲ್ಲಿಂದ ಬಿಐಇಸಿ ಹೆಲಿಪ್ಯಾಡ್ ತಲುಪಿದ್ದಾರೆ. ಅಲ್ಲಿಂದ ಸುಮಾರು 5 ಕಿ.ಮೀ. ರೋಡ್ ಶೋ ನಡೆಯಲಿದೆ.
ಮಾಗಡಿ ರೋಡ್ ನೈಸ್ ರೋಡ್ನಿಂದ ರೋಡ್ ಶೋ ಆರಂಭವಾಗಿ, ಸುಮನಹಳ್ಳಿ ಜಂಕ್ಷನ್ನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆ ಸುಮನಹಳ್ಳಿ ಜಂಕ್ಷನ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮನಹಳ್ಳಿ ಜಂಕ್ಷನ್ನಲ್ಲಿ ಎಲ್ಲಾ ರೋಡ್ಗಳನ್ನು ಬಂದ್ ಮಾಡಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ.
ನೈಸ್ ರಸ್ತೆ ಜಂಕ್ಷನ್ ಬಳಿ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಮೋದಿ ರೋಡ್ ಶೋ ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಸುರಕ್ಷಣೆಯ ಹಿನ್ನೆಲೆಯಿಂದ ಕಟ್ಟಡದ ಮೇಲ್ಭಾಗಕ್ಕೆ ಯಾರು ಹೋಗದಂತೆ ಎಚ್ಚರ ವಹಿಸಲಾಗಿದೆ.
ಪ್ರಧಾನಿ ಮೋದಿ ಅವರ ಆಗಮಕ್ಕಾಗಿ ಕಾಯುತ್ತಿರು ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಿಡಿದು, ಬಿಜೆಪಿ ಬಾವುಟದೊಂದಿಗೆ ಸಾರ್ವಜನಿಕರು ಮತ್ತು ಬಿಜೆಪಿ ಅಭ್ಯರ್ಥಿಗಳು ಮೋದಿ ಆಗಮನಕ್ಕಾಗಿ ಕಾಯುತ್ತಿದ್ದಾರೆ.
ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ಸಾಂಸ್ಕೃತಿಕ ಕಲಾತಂಡಗಳ ಆಯೋಜನೆ ಮಾಡಲಾಗಿದೆ. ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ.