ಸುದ್ದಿಮೂಲ ವಾರ್ತೆ,
ಮೈಸೂರು, ಮೇ 2: ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ , ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಚರಿಸಿ ಬಿರುಸಿನ ಪ್ರಚಾರ ನಡೆಸಿದರು. ಅವರೊಡನೆ ಚಿತ್ರನಟ ಶಶಿಕುಮಾರ್ ಇದ್ದರು.
ಎರಡು ಜಿಲ್ಲೆಗಳ ವ್ಯಾಪ್ತಿಗೆ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಸಭೆಗಳಲ್ಲಿ ಈರ್ವರು ಮಾತನಾಡಿ ತಮ್ಮ ಪಕ್ಷಗಳಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಮತ ನೀಡಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಸಂಸದ ಪ್ರತಾಪ್ ಸಿಂಹ, ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ, ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್, ಟಿ ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ರೇವಣ್ಣ, ಮಾಜಿ ಸಂಸದ ಹಾಗು ನಟ ಶಶಿಕುಮಾರ್, ಮಾಜಿ ಸಚಿವ ಎಂ ಶಿವಣ್ಣ, ಮಾಜಿ ಎಂಎಲ್ಸಿ ಸಿ ರಮೇಶ್, ಮುಖಂಡರಾದ ಎಲ್ ರೇವಣ್ಣಸಿದ್ಧಯ್ಯ, ಕಾಪು ಸಿದ್ಧಲಿಂಗಸ್ವಾಮಿ, ಎಸ್ ಮಹದೇವಯ್ಯ, ಎಂ ಅಪ್ಪಣ್ಣ, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಿದ್ದರು.