ಸುದ್ದಿಮೂಲ ವಾರ್ತೆ
ಹೊಸಕೋಟೆ, ಮೇ 4: ಈ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕರಾದ ಮಂಜುನಾಥ್ ಅಣ್ಣಯ್ಯ ತಿಳಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕರ್ನಾಟಕ ರಾಜ್ಯ ಕೇಂದ್ರ ಸಮಿತಿ ಬೆಂಗಳೂರು ಒಟ್ಟಾಗಿ ಈ ತೀರ್ಮಾನ ಕೈಗೊಂಡಿದೆ ಎಂದು ಅವರು ಹೊಸಕೋಟೆಯಲ್ಲಿ ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
2023 ಸಾರ್ವತ್ರಿಕ ಚುನಾವಣೆಯಲ್ಲಿ ವಿಧಾನಸಭಾ 124 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಮ್ಮ ಸಂಘಟನೆಯು ಸರ್ವಸಮತವಾಗಿ ತೀರ್ಮಾನಿಸಲಾಗಿದೆ. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ನೀಡಿ ಹೆಚ್ಚಿನ ಮತಗಳಿಂದ ಆರಿಸಿ ಕೊಡುವಂತೆ ಮತದಾರರಲ್ಲಿ ವಿನಂತಿ ಮಾಡಿದರು.
ಸಾಹಿತಿ ಗೊಲ್ಲಹಳ್ಳಿ ಶಿವಪ್ರಕಾಶ್ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಲು ತೀರ್ಮಾನಿಸಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇತ್ತೀಚಿನ ಆಡಳಿತರೂಢ ಪಕ್ಷ ಬಿಜೆಪಿ ನಡೆದುಕೊಂಡ ರೀತಿ, ದುರಾಡಳಿತ, ಸಂವಿಧಾನ ವಿರೋಧಿ ಹೇಳಿಕೆಗಳು ಜನರಲ್ಲಿ ಸಮಾನತೆ ಕಾಣದೆ ಸಂವಿಧಾನದ ಚೌಕಟ್ಟಿನಲ್ಲಿ ಆಡಳಿತವನ್ನು ನಡೆಸಿಲ್ಲ. ಅಲ್ಲದೆ, ಒಪ್ಪಿರುವಂತಹ ಭಾರತದ ಸಂವಿಧಾನವನ್ನ ಕಿತ್ತೊಗೆಯುತ್ತೇವೆ ಎಂಬ ಹೇಳಿಕೆ ನೀಡಿರುವ ಬಿಜೆಪಿ ಪಕ್ಷ ಮನುಸ್ಮೃತಿಯನ್ನು ಜಾರಿಗೆ ತರಲು ಹೊರಟಿರುವ ಬಿಜೆಪಿಗೆ ಬೆಂಬಲ ಇಲ್ಲ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕರಾದ ಲೋಕೇಶ್, ತಾಲೂಕು ಅಧ್ಯಕ್ಷ ಎನ್. ನಾರಾಯಣಸ್ವಾಮಿ
ಮುಂತಾದವರು ಇದ್ದರು