ಕೇವಲ ಎರಡು ಸ್ಥಾನದಿಂದ ಆರಂಭಿಸಿ, ಸ್ವಂತ ಬಲದಿಂದ ಸರ್ಕಾರ ರಚಿಸಿರುವ ಬಿಜೆಪಿಗೆ ಸೋಲು -ಗೆಲುವು ಬಿಜೆಪಿಗೆ ಹೊಸದಲ್ಲ. ಈ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯರಪ್ಪ ಹೇಳಿದ್ದಾರೆ.
ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಆಡಳಿತ ನೀಡಿದೆ. ಆದರೂ ಪಕ್ಷಕ್ಕೆ ಹಿನ್ನೆಡೆ ಆಗಿದೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭಿವೃದ್ಧಿಗೆ ನಮ್ಮ ಪಕ್ಷದ ಸಹಕಾರ ಯಾವಗಲೂ ಇರುತ್ತದೆ. ರಾಜ್ಯದ ಜನತೆಯ ಈ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಅಲ್ಲದೇ ರಾಜ್ಯದ ಮತದಾರನಿಗೆ ಧನ್ಯವಾದ ಸಲ್ಲಿಸುತ್ತೇನೆ.
ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ. 25 ಸಂಸದರನ್ನು ರಾಜ್ಯದಿಂದ ಆರಿಸಿ ಕಳುಹಿಸಿದ್ದೇವೆ. ಮುಂದಿನ ಚುನಾವಣೆಯಲ್ಲೂ ಸಹ ಅಷ್ಟೇ ಸಂಸದರನ್ನು ಆಯ್ಕೆ ಮಾಡಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದು ಹೇಳಿದರು.