ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಮೇ18: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿ ಗ್ರಾಮದಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ (ಪಿಸಿಎಂಬಿ) ಮತ್ತು ವಾಣಿಜ್ಯ ವಿಭಾಗದಲ್ಲಿ (ಹೆಚ್ಇಬಿಎ) ಈ ಎರಡು ಕೋರ್ಸ್ಗಳು ಲಭ್ಯವಿದ್ದು ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾದ ಬಾಲಕಿಯರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು ಈ ವಸತಿ ಕಾಲೇಜಿನಲ್ಲಿ ಸಿಬಿಎಸ್ಇ ಪಠ್ಯ ಕ್ರಮವನ್ನು ಬೋಧಿಸಲಾಗುತ್ತದೆ ಮೇ 12 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಮೇ 25 ಕೊನೆ ದಿನವಾಗಿರುತ್ತದೆ.
ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ವರ್ಗಕ್ಕೆ ಶೇ.75 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ರಷ್ಟು ಸೀಟುಗಳನ್ನು ಮೀಸಲಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ವಸತಿ ಶಾಲೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಸಲ್ಲಿಸಬಹುದಾಗಿರುತ್ತದೆ.
ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ವಿದ್ಯಾರ್ಥಿನಿಯರ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ 7349008289, 8970089688, 9740182093 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಲು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

            