ಸುದ್ದಿಮೂಲವಾರ್ತೆ
ಕೊಪ್ಪಳ,ಮೇ 19 : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ (ಸಿ.ಬಿ.ಎಸ್.ಸಿ) ವಸತಿ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಅಥವಾ ಪೋಷಕರು ಅಗತ್ಯ ಎಲ್ಲಾ ದಾಖಲೆಗಳೊಂದಿಗೆ ವಸತಿ ಕಾಲೇಜುಗಳಿಗೆ ಭೇಟಿ ನೀಡಿ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಪಡೆದು, ಉಚಿತವಾಗಿ ಅರ್ಜಿಗಳನ್ನು ಆಯಾ ಕಾಲೇಜುಗಳಲ್ಲಿಯೇ ಸಲ್ಲಿಸಬಹುದಾಗಿದೆ.
ಅಲ್ಪಸಂಖ್ಯಾತರ ವಸತಿ ಕಾಲೇಜುಗಳಲ್ಲಿ ಶೇ. 75 ಸಿಟುಗಳನ್ನು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಸಿಟುಗಳನ್ನು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಯಾವುದೇ ವಸತಿ ಶಾಲೆ, ಸರ್ಕಾರಿ ಅಥವಾ ಸರ್ಕಾರದದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷಗಳನ್ನು ಮೀರಿರಬಾರದು. ವಿಕಲಚೇತನರಿಗೆ ಶೇ.3 ರಷ್ಟು ಪ್ರವೇಶ ಮೀಸಲಿರಿಸಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳಿಗೆ ಸೌಲಭ್ಯಗಳು: ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಾಗ್ರಿ ಸೇರಿದಂತೆ ಇತರೆ ಸೌಲಭ್ಯಗಳು ಉಚಿತವಾಗಿ ಒದಗಿಸಲಾಗುವುದು. ಅಲ್ಲದೇ ನೀಟ್, ಜೆಇಇ (ಮೇನ್ಸ್ & ಅಡ್ವಾನ್ಸಡ್), ಕೆಸಿಇಟಿ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುವುದು. ತಾಂತ್ರಿಕ, ವೈದೈಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ತರಬೇತಿಯನ್ನು ಸಹ ಉಚಿತವಾಗಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಕೊಪ್ಪಳ ಮೊ.ಸಂ: 9986470630, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಕುಕನೂರು ಮೊ.ಸಂ: 8105457095, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಹಿರೇಬೆಣಕಲ್ (ಗಂಗಾವತಿ) ಮೊ.ಸಂ: 9880958503 ಹಾಗೂ ಡಾ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು ಹಿರೇಸಿಂಧೋಗಿ (ಸಿ.ಬಿ.ಎಸ್.ಸಿ) ಮೊ.ಸಂ: 9164912127, ಈ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ (ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ) ಕೊಪ್ಪಳ ದೂ.ಸಂ: 08539-225070, ಮೊ.ಸಂ: 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578, ಯಲಬುರ್ಗಾ ಮೊ.ಸಂ: 9620522537 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.