ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ20: ಕುಷ್ಟಗಿ ತಾಲೂಕಿನ ನಿವೃತ್ತ ಮುಖ್ಯಶಿಕ್ಷಕ ದಾಮೋದಾಚಾರ ತಂದಿ ಗೋವಿಂದಾಚಾರ ಜೋಷಿ(81) ಶನಿವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳು ಹಾಗೂ ಶಿಷ್ಯ ಬಳಗವನ್ನು ಅಗಲಿದ್ದಾರೆ. ಕುಷ್ಟಗಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೂವತ್ತೈದಕ್ಕೂ ಹೆಚ್ಚು ವರ್ಷಗಳ ಕಾಲ ಸಹಶಿಕ್ಷಕರಾಗಿ ಹಾಗೂ ಮುಖ್ಯಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿ ಅಪಾರ ಶಿಷ್ಯ ಬಳಗವನ್ನು ಹೊಂದಿ ನೆಚ್ಚಿನ ಗುರುಗಳಾಗಿ ಗೌರವ ಸಂಪಾದಿಸಿದ್ದರು. ಇತ್ತೀಚೆಗೆ ವಯೋಸಹಜ ಕಾಯಿಲೆಯ ಚಿಕಿತ್ಸೆಯೊಂದಿಗೆ ಇಲಕಲ್ಲ ಪಟ್ಟಣದ ಪುತ್ರನ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಇಲಕಲ್ಲ ಪಟ್ಟಣದ ಹೊರವಲಯದ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿವೃತ್ತ ಮುಖ್ಯಶಿಕ್ಷಕ ದಾಮೋದಾಚಾರ ಜೋಷಿ ಅವರ ನಿಧನಕ್ಕೆ ಕುಷ್ಟಗಿ ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಹಾಗೂ ಗಣ್ಯರು ಕಂಬನಿ ಮಿಡಿದಿದ್ದಾರೆ.